ಮಾಜಿ ಮುಖ್ಯಮಂತ್ರಿ ಎಸ್ ಎಮ್ ಕೃಷ್ಣ ನಿಧನಕ್ಕೆ ಭಾಜಪ ಮುಖಂಡ ರಾಮಸಿಂಗ ಸಂತಾಪ
ಇಂಡಿ : ಮಾಜಿ ಮುಖ್ಯಮಂತ್ರಿ ಎಸ್ ಎಮ್ ಕೃಷ್ಣ ಅವರ ನಿಧನಕ್ಕೆ ಭಾಜಪ ಯುವ ಮುಖಂಡ ರಾಮಸಿಂಗ ಕನ್ನೊಳ್ಳಿ ಸಂತಾಪ. ಮಾಜಿ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ವಿದೇಶಾಂಗ ಸಚಿವರು ಹಾಗೂ ಕರ್ನಾಟಕ ಕಂಡ ಅತ್ಯುತ್ತಮ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿದ್ದ ಹಿರಿಯರು,ಮುತ್ಸದ್ದಿಗಳಾದ ಶ್ರೀ ಎಸ್.ಎಂ.ಕೃಷ್ಣ ಜಿ ಅವರು ನಮ್ಮನ್ನು ಅಗಲಿರುವ ಸುದ್ದಿ ಕೇಳಿ ಬಹಳ ನೋವುಂಟಾಯಿತು.
ಅಗಲಿದ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಅಭಿಮಾನಿ ವರ್ಗಕ್ಕೆ ಮತ್ತು ರಾಜ್ಯದ ಜನತೆಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.