ವಿಜಯಪುರ ಬಾಗಲಕೋಟ ವಿಧಾನ ಪರಿಷತ್ ಹಿನ್ನೆಲೆಯಲ್ಲಿ ನಡೆದ ಮತ ಎಣಿಕೆಯಲ್ಲಿ ಬಿಜೆಪಿ ಪ್ರಯಾಸದ ಗೆಲುವು ಸಾಧಿಸಿದೆ.
ಹೌದು ,ಕೇವಲ 17 ಮತಗಳಿಂದ ಬಿಜೆಪಿ ಅಭ್ಯರ್ಥಿ ಗೆಲುವಿನ ನಗೆಯನ್ನು ಬಿಜೆಪಿ ಅಭ್ಯರ್ಥಿ ಪಿ.ಎಚ್. ಪೂಜಾರ ಬೀರಿದ್ದಾರೆ.
ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಲೋಣಿ ಅವರನ್ನು 17ಮತಗಳಿಂದ ಸೋಲಿಸಿದ್ದಾರೆ. ಎರಡನೇ ಪ್ರಾಶಸ್ತ್ಯ ಮತಗಳಿಂದ ಪಿ.ಎಚ್. ಪೂಜಾರ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ,ಗುಲಾಲ್ ಎರಚೆ ಸಂಭ್ರಮಿಸಿದರು.